ಗ್ರಾಮ ಒನ್
ಕರ್ನಾಟಕ ಸರ್ಕಾರ

ಗ್ರಾಮ ಒನ್ ಬಗ್ಗೆ

ಗ್ರಾಮ-ಒನ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಸಿಂಧು ಯೋಜನೆಯಡಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಅಂದರೆ ಸುಮಾರು 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅದೇ ರೀತಿ ಸಕಾಲ, ಮಾಹಿತಿ ಹಕ್ಕು ಅಧಿನಿಯಮ , ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದು-ಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸಹ ಸ್ವೀಕರಿಸಲಾಗುವುದು. ಗ್ರಾಮ-ಒನ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಯವರು ಎಫ್‌ವೈ 20-21ರ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ಸಂಜೆ 8 ರವರೆಗೆ ಕಾರ್ಯನಿರ್ವಹಿಸಲಿವೆ.

ಗ್ರಾಮ ಒನ್ ಕೇಂದ್ರಗಳ ಪ್ರಯೋಜನಗಳು ಹೀಗಿವೆ:

  • ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ,ತಾಲ್ಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ.
  • ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯಬಹುದಾಗಿದೆ .
  • ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಮತ್ತು ಹಣವನ್ನು ಉಳಿಸಬಹುದು.
  • ಮಧ್ಯವರ್ತಿಗಳಿಂದ ಯಾವುದೇ ಅಪಾಯವಿಲ್ಲ.